ಬೆಳಗಾವಿ:- ಸಂಕ್ರಾಂತಿ ಹಬ್ಬದ ದಿನವೇ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರ ಗಾಯವಾಗಿದ್ದು, ಇನ್ನೂ ಒಂದು ತಿಂಗಳ ಗೃಹ ವಿಶ್ರಾಂತಿ ಅವಶ್ಯಕತೆ ಇದೆ ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ.
ಬೀದಿ ನಾಯಿಗಳ ಮೇಲೆ ಕಾರು ಚಾಲಕರ ವಿಕೃತಿ: ಓ ಮನುಷ್ಯ ನೀನೆಷ್ಟು ಕ್ರೂರಿ! ಭಯಾನಕ VIDEO ಇಲ್ಲಿದೆ!
ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನುಮೂಳೆ ಮುರಿತ ಕೇಸ್ ಗೆ ಸಂಬಂಧಪಟ್ಟಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಂಬಂಧ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕನು ಟ್ರಕ್ ವಾಹನ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಟ್ರಕ್ ಚಾಲಕ ತಮ್ಮನ್ನು ಓವರ್ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾತವಾಗಿದೆ ಎಂದು ಕಾರಿನ ಚಾಲಕ ಜಿ. ಶಿವಪ್ರಸಾದ್ ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ ಕಾಯ್ದೆ ಅಡಿ 281, 125ಎ, 125 ಬಿ, ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ 134, 187 ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.