ಬೆಂಗಳೂರು:- ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ
ಹಿಂದಿನ ಸರ್ಕಾರ ಮಾಡಿದ ಸಾಲ ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ ಖರ್ಗೆ!
ಈ ಸಂಬಂಧ ಮಾತನಾಡಿದ ಅವರು, ನಾವು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಯಾರಲ್ಲೂ ಅಸಮಾಧಾನ ಇಲ್ಲ. ಎಲ್ಲರೂ ಕೂಡ ಪಕ್ಷ, ಸರ್ಕಾರದ ಹಿತದೃಷ್ಟಿಯಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿರುವುದಾಗಿ ತಿಳಿಸಿದರು.
ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ. ಪಕ್ಷದ ಎಲ್ಲ ಮಾಹಿತಿ ಅವರ ಬಳಿಯಿದೆ. ಸೋಮವಾರ ಬೆಳಗ್ಗೆ ನಡೆದ ಸರ್ವ ಸದಸ್ಯರ ಸಭೆಗೆ ಕಾರಣಾಂತರಗಳಿಂದ ಪರಮೇಶ್ವರ್ ಬರಲು ಸಾಧ್ಯವಾಗಿಲ್ಲ ಎಂದರು.