ಬೆಳಗಾವಿ:- ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಬೆಂಬಲಿಗರ ವಿರುದ್ಧ ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿದಿರುವ ಆರೋಪ ಕೇಳಿ ಬಂದಿದೆ.
ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಚನ್ನರಾಜ ಹಟ್ಟಿಹೊಳಿ ಅವರ ಐದಾರು ಜನ ಬೆಂಬಲಿಗರು ಏಕಾಏಕಿ ಬಂದು ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ. ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಕ್ಷಣವೇ ಪೃಥ್ವಿ ಸಿಂಗ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ಎಂ.ಬಿ.ಜೀರಲಿ ಸೇರಿ ಮತ್ತಿತರರು ಭೇಟಿ ನೀಡಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದರು. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.