ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಹೆಬ್ಬಾಳ್ಕರ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಇನ್ನೂ ಈ ವಿಚಾರಕ್ಕೆ ಸಂಬಂಧೀಸಿದಂತೆ ಅವರ ಮಗ ಮೃಣಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ದೊಡ್ಡ ಅಪಘಾತದಿಂದ ತಮ್ಮ ತಾಯಿಯವರು ಪಾರಾಗಿದ್ದಾರೆ. ಕ್ಷೇತ್ರದ ಜನರ ಆಶೀರ್ವಾದ ಅವರ ಮೇಲಿದೆ ಎಂದು ಹೇಳಿದ್ದಾರೆ. ಹೌದು ಸಚಿವೆ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಹಾಗೂ ಸಹೋದರನಿಗೆ ಗಂಭೀರಸ್ವರೂಪದ ಗಾಯಗಳೇನೂ ಅಗಿಲ್ಲ,
ಸಚಿವೆಯ ಬೆನ್ನುಮೂಳೆಗೆ ಗಾಯವಾಗಿದೆ, ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವರೆಂದು ಹೇಳಿದರು. ನಿನ್ನೆ ಬೆಂಗಳೂರಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ಸಚಿವೆ ತಮ್ಮ ಕ್ಷೇತ್ರಕ್ಕೆ ವಾಪಸ್ಸಾಗುತ್ತಿದ್ದಾಗ ಅಪಘಾತ ಜರುಗಿದೆ.