ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಆರೋಪ ಪ್ರಕರಣದ ಸಂಬಂಧ ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.
ಬದನೇಕಾಯಿ ಕೇವಲ ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ!
ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.