ಬೆಂಗಳೂರು :- ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಚ್ಡಿ ಕುಮಾರಸ್ವಾಮಿ ಹಾಗೂ ಡಿಸಿ ತಮ್ಮಣ್ಣ ವಿರುದ್ಧದ ಕೇತಗಾನಹಳ್ಳಿ ಬಳಿಯ 14 ಎಕರೆ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿಂದು ಅರ್ಜಿ ವಿಚಾರಣೆ ನಡೆದಿದ್ದು, ವರದಿ ಸಲ್ಲಿಸದಕ್ಕೆ ಕೋರ್ಟ್ ಗರಂ ಆಗಿದೆ.
ವಿಚಾರಣೆಗೆ ಹಾಜರಾಗಿದ್ದ ಕಂದಾಯ ಇಲಾಖೆಯ ಪ್ರದಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಎಸ್ಆರ್ ಹಿರೇಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ.ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳು ಉನ್ನತ ಹುದ್ದೆಯಲ್ಲಿದ್ದಾರೆಂದು 5 ವರ್ಷ ಏನೂ ಮಾಡಿಲ್ಲ. ನೀವು ಐದು ವರ್ಷ ಏನೂ ಮಾಡಿಲ್ಲ. ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ನಿಮ್ಮ ಕೈಲಿ ಆಗದಿದ್ರೆ ನಿಮ್ಮನ್ನ ಎಲ್ಲಿ ಕಳಿಸಬೇಕೊಕೋ ಅಲ್ಲಿಗೆ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ಸರಿಹೋಗುತ್ತೀರಿ ಕ್ಲಾಸ್ ತೆಗೆದುಕೊಂಡಿದೆ.