ಬೆಂಗಳೂರು: ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ. ನಾವು ಒಂದು ವರ್ಷ,
ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ನಾವು ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಯ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
PM Kisan tractor: ಟ್ರಾಕ್ಟರ್ ಖರೀದಿಸುವ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಭರ್ಜರಿ ಸಬ್ಸಡಿ! ಇಂದೇ ಅರ್ಜಿ ಸಲ್ಲಿಸಿ
ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ಆಗುತ್ತಿತ್ತು ಎಂದರು.