ಬೆಂಗಳೂರ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಗೆ ಧಕ್ಕೆ ತರಬಹುದು ಎಂಬ ಅನುಮಾನಗಳ ಮಧ್ಯೆ ಎಚ್.ಡಿ. ಕುಮಾರಸ್ವಾಮಿ ಮತ್ತು ಅಮಿತ್ ಶಾ ನಡುವೆ ಮಹತ್ವದ ಮಾತುಕತೆ ನಡೆದಿದೆ. ನಿನ್ನೆ ಶನಿವಾರ ತಡರಾತ್ರಿ ನಡೆದ ಈ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಮತ್ತು ಮೈತ್ರಿ ಬಗ್ಗೆ ಚರ್ಚೆಗಳಾಗಿವೆ.
APL Card: ಸಿಹಿ ಸುದ್ದಿ: ಜೂನ್ʼನಿಂದ APL ಪಡಿತರ ಚೀಟಿ ವಿತರಣೆ..! ಹೊಸ ಕಾರ್ಡ್ʼಗಳಿಗೆ ಅರ್ಜಿ ಆಹ್ವಾನ
ಈ ವೇಳೆ ಜೆಡಿಎಸ್ನ ಮಿತ್ರ ಪಕ್ಷವಾಗಿ ಬಿಜೆಪಿ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭರವಸೆ ನೀಡಿದರೆನ್ನಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಏನಾಗುತ್ತೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ, ಈಗ ತನಗೆ ಮೈತ್ರಿ ಮುಖ್ಯ ಅಲ್ಲ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದರು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಮತ್ತು ಎಚ್ಡಿಕೆ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.