ನವದೆಹಲಿ: ಬೆಂಬಲ ಬೆಲೆ ಕಾನೂನು ಜಾರಿ ಸೇರಿ ವಿವಿಧ ಬೇಡಿಕೆಗೆಗಳ ಈಡೇರಿಸುವಂತೆ ರೈತರು ದೆಹಲಿ ಚಲೋ (Delhi chalo) ಪ್ರತಿಭಟನೆ ಆರಂಭಿಸಿದ್ದು ರಾಷ್ಟ್ರ ರಾಜಧಾನಿ ತೆರಳದಂತೆ ತಡೆಯಲು ಹರ್ಯಾಣ ಪೊಲೀಸರು (Hariyana Police) ರೈತರ (Farmers) ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಲಘು ಲಾಠಿ ಪ್ರಹಾರ ಕೂಡಾ ನಡೆಸಲಾಗಿದೆ. ಪೊಲೀಸರ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನ ಮಾಡಿವೆ.
ಈ ಬಗ್ಗೆ ಮಾಹಿತಿ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ರೈತರ ಮೇಲೆ ನಡೆಸಿರುವ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು ದೇಶದಾದ್ಯಂತ ಪ್ರತಿಭಟಿಸಿ ಗ್ರಾಮೀಣ ಮಟ್ಟದಲ್ಲಿ ರಸ್ತೆ ಬಂದ್ ಮಾಡಲು ತಿರ್ಮಾನಿಸಿದೆ. ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಶುಕ್ರವಾರ ರಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೂ ರಸ್ತೆ ಬಂದ್ ಚಳುವಳಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
West Bengal: ಆತ್ಮಹತ್ಯೆಗೆಂದು ಸೇತುವೆ ಏರಿ ಹುಚ್ಚಾಟ.! ಆದ್ರೆ ಬಿರಿಯಾನಿಗಾಗಿ ಕೆಳಗಿಳಿದ ವ್ಯಕ್ತಿ
ಇದೇ ವೇಳೆ ಮೋದಿ ಸರ್ಕಾರದ ಬಗ್ಗೆ ಮಾತನಾಡಿ, ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನ ಖಂಡಿಸುತ್ತೇನೆ. ರೈತರ ಮೇಲೆ ಅಶ್ರುವಾಯು ಶೆಲ್ಗಳನ್ನು ಎಸೆಯಲು ಡ್ರೋನ್ಗಳನ್ನು ಬಳಸಿರುವುದು ಅತ್ಯಂತ ಅಘಾತಕಾರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)