ಬೆಂಗಳೂರು:- ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದ ವಕೀಲ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದ್ದು ಇದೀಗ ದೂರು ದಾಖಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೇವರಾಜೇಗೌಡ ಬ್ಲ್ಯಾಕ್ಮೇಲರ್ ಎಂದು ಈಗಾಗಲೇ ಕುಖ್ಯಾತಿಯಾಗಿದ್ದಾರೆ. ಏ.1ರಂದು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಬಹಿರಂಗ ಪೆನ್ಡ್ರೈವ್ ಕೇಸ್ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತನ ಹೀನ ಕೃತ್ಯ ಬಹಿರಂಗವಾಗಿದ್ದು, ತಕ್ಷಣ ಕಾನೂನು ಕ್ರಮಕೈಗೊಂಡು ಬಂಧಿಸಬೇಕು ದೂರಿನಲ್ಲಿ ತಿಳಿಸಲಾಗಿದೆ.