ಬೆಂಗಳೂರು: ಬೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎನ್ನುವ ವಕೀಲೆಯ ಆತ್ಮಹತ್ಯೆ ಘಟನೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡತೊಡಗಿದೆ. ಇದೀಗ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ನೀಡಿದೆ.
ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ.
ಗಮನಿಸಿ.. ಮಣ್ಣು ಪರೀಕ್ಷಾ ಕೇಂದ್ರ ತೆರೆಯಲು ಸರ್ಕಾರದಿಂದ ಸಿಗಲಿದೆ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ
ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಎಸ್ಐಟಿ ರಚಿಸಿ ಆದೇಶ ಹೊರಡಿದೆ.