ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.