ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಸಂಬಂಧ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಕುರಿತು ಮುಖ್ಯಮಂತ್ರಿಗಳದ್ದು ಪರಮೋಚ್ಛ ಅಧಿಕಾರ, ನಾನು ಕೇವಲ ತಂಡದ ಸದಸ್ಯ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಎಂದು ಹೇಳಿದರು. ಇನ್ನೂ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಅನ್ನುವುದು ಸಿಎಂ ಗೆ ಬಿಟ್ಟ ವಿಚಾರ ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದರು.
