ಹಾಸನ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಗುರಿ. ದೇವೇಗೌಡರು, ಕುಮಾರಸ್ವಾಮಿ ಎಲ್ಲರದ್ದೂ ಇದೇ ಗುರಿ. ನಮಗೆ ಬೇರೆ ಯಾವುದರ ಬಗ್ಗೆಯೂ ಚಿಂತೆ ಇಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಬೇಕಾದಾಗ ಎಚ್ ಡಿ ಕುಮಾರಸ್ವಾಮಿ ಅವರ ಮನೆ ಬಳಿ ಬರುತ್ತಾರೆ. ಅವರು ಅಧಿಕಾರಕ್ಕೆ ನಮ್ಮನ್ನ ಬಂದಾಗ ದೂರ ಇಡುತ್ತಾರೆ ಎಂದು ಆರೋಪಿಸಿದರು.
ಇದೇವೇಳೆ ನಮಗೆ ಎಷ್ಟು ಸ್ಥಾನ ಕೊಡಬೇಕು ಎಂಬುದು ಸೇರಿದಂತೆ ಯಾವುದರ ಬಗ್ಗೆಯೂ ಸದ್ಯಕ್ಕೆ ನಿರ್ಧಾರ ಆಗಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ನಂಬಬೇಡಿ. ಮೈತ್ರಿ ಬಿಟ್ಟು ಬನ್ನಿ. ನಾವು ಬೆಂಬಲಿಸ್ತೇವೆ ಎಂದು ಅಂದೇ ಪ್ರಧಾನಿ ಮೋದಿ ಹೇಳಿದ್ದರು. ಆಗ ಸಮಯ ಕೂಡಿ ಬಂದಿರಲಿಲ್ಲ. ಈಗ ಬಂದಿದೆ. ಅದನ್ನು ಸಹಿಸದೇ ಕಾಂಗ್ರೆಸ್ ನವರು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಜೊತೆಗೆ ಹೋದ ಎಲ್ಲರಿಗೂ ಇದೇ ಪರಿಸ್ಥಿತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಇದೇ ವೇಳೆ ಭವಾನಿ ರೇವಣ್ಣ ಅವರು ಕಾರು ಚಾಲಕನೊಬ್ಬನಿಂದ ಆಸ್ತಿ ಬರೆಸಿಕೊಂಡಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಭವಾನಿ ಯಾರಿಗೆ ಸಹಾಯ ಮಾಡಿದ್ದಾರೆ ಅನ್ನೋದು ಆ ದೇವರಿಗೆ ಗೊತ್ತು ಇದೆಲ್ಲ ರಾಜಕೀಯದ ಕುತಂತ್ರ. ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಈ ರೀತಿ ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ ಹಿನ್ನಲೆಯಲ್ಲಿ ಆರೋಪ ಮಾಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂದು ಆರೋಪಿಸಿದರು.