ಶಿವಮೊಗ್ಗ:- ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ ನಡೆಸಿರುವ ಘಟನೆ ಜರುಗಿದೆ.
ಪುರುಷರೇ ನಿಮ್ಮ ಹೊಟ್ಟೆ ಬಲೂನ್ ತರ ಊದಿದ್ಯಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಗ್ಯಾರಂಟಿ ರಿಸಲ್ಟ್!
ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅನುಮತಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಉಪನ್ಯಾಸಕರನ್ನು ಪ್ರೊ.ರಾಜು ಎಂದು ಗುರುತಿಸಲಾಗಿದೆ. ಇನ್ನೂ ರಾಜು ಅವರೇ ಮೊದಲು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕ ವಿಜಯ್ಕುಮಾರ್ ಆರೋಪಿಸಿದ್ದಾರೆ.
ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಹಲ್ಲೆಗೊಳಗಾದ ಉಪನ್ಯಾಸಕರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.