ನೆಲಮಂಗಲ: ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಲೋಕೇಶ್ ಮನೆಯ ಮುಂದೆ ರಾತ್ರಿ ಸಾಕು ಕೋಳಿಗಳ ಮೇಲೆ ದಾಳಿ ನಡೆದಿದ್ದು, ನೆಲಮಂಗಲ ತಾಲೂಕಿನ ಗೊರವನಹಳ್ಳಿ ಗ್ರಾಮದ ಬಳಿ ಘಟನೆ ಜರುಗಿದೆ.
ಮನೆಯ ಸಿಸಿಟಿವಿ ಕ್ಯಾಮರದಲ್ಲಿ ಚಿರತೆಯ ದಾಳಿಯ ದೃಶ್ಯ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.