ನೆಲಮಂಗಲ: ಜಿಲ್ಲೆಯಲ್ಲಿ ಸಿಕ್ಕ ಸಿಕ್ಕಕಡೆಯಲ್ಲಿ ನಿರಂತರವಾಗಿ ಚಿರತೆ ದಾಳಿ ನಡೆದಿದೆ. ನೆಲಮಂಗಲ ವಲಯ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ನೆನ್ನೆ ಸಂಜೆ ಶೀಲಾ ಅಭಿಷೇಕ್ ತೋಟದಲ್ಲಿ ಪ್ರತ್ಯಕ್ಷವಾಗಿದೆ. ಸಾಕು ನಾಯಿಯ ಮೇಲೆ ದಾಳಿ ಮಾಡಿರುವ ವಿಡಿಯೋ ಸೆರೆಯಾಗಿದೆ. ತೋಟದ ಮನೆಯ ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆಯಾಗಿದೆ. ನಿರಂತರವಾಗಿ ನೆಲಮಂಗಲ ತಾಲೂಕಿನಲ್ಲಿ ಚಿರತೆ ದಾಳಿ ನಡೆದರೂ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ನೆಲಮಂಗಲ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.