ಬೆಂಗಳೂರು:- ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಗಂಡ್ಮಕ್ಳೇ ಹುಷಾರ್: ಎಂಟ್ರಿ ಕೊಟ್ಟಿದೆ ಮದುವೆ ಮಾಡಿಸೋ ಗ್ಯಾಂಗ್! ನಂಬಿದ್ರೆ ಮೂರು ನಾಮ ಗ್ಯಾರಂಟಿ!
ಈ ಸಂಬಂಧ ಮಾತನಾಡಿದ ಅವರು, ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ ಜಾವ 4:30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.
ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು, ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ ಎಂದರು.