ಮೈಸೂರು: ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಚಿರತೆಗಳು ಕಾಣಿಸಿಕೊಳ್ಳತ್ತಿವೆ. ಆಗಾಗ ಜನರ ಕಣ್ಣಿಗೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿತ್ತಿತ್ತು. ಇದೀಗ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡಿದೆ.
ಇಂದು ಬೆಳಗ್ಗೆ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆಯ ಚಲನವಲನ ಕ್ಯಾಂಪಸ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆ ಆದೇಶ ಹೊರಡಿಸಿದೆ.
ಬೆಳ್ಳಂ ಬೆಳಗ್ಗೆ ಟೀ ಜೊತೆಗೆ ಬಿಸ್ಕತ್ ತಿಂತೀರಾ..? ಹಾಗಾದ್ರೆ ಈ ಅಭ್ಯಾಸ ಈಗ್ಲೇ ಬಿಟ್ಟು ಬಿಡಿ!
ಕ್ಯಾಂಪಸ್ನಲ್ಲಿ ಚಿರತೆ ಓಡಾಟ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರೆಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಚಿರತೆ ಸೆರೆಗೆ ಪ್ಲಾನ್ ರೂಪಿಸಿದ್ದಾರೆ. ಇನ್ನು ಸುತ್ತಮುತ್ತಲಿನ ಪ್ರದೇಶದ ಜನರಲ್ಲೂ ಆತಂಕ ಮನೆ ಮಾಡಿದೆ.