ಕೋಲಾರ: ಬಿಜೆಪಿ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಕಿಡಿಕಾರಿದ್ದಾರೆ. ಸಿಎಂ ಬದಲಾವಣೆ ಕುರಿತು ಬಿಜೆಪಿ ಹೇಳಿಕೆ ಬಗ್ಗೆ ಕೋಲಾರದ ಮಾಲೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಅನ್ನೋದು ಅವರಿಗೆ ಗೊತ್ತಾಗಿದೆ.
ಕೇಂದ್ರ ಸರ್ಕಾರ, ರಾಜ್ಯಪಾಲರು ಹಾಗೂ ಇ.ಡಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇಳಿಸಲು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿಯ ತಿರುಕನ ಕನಸು ನನಸಾಗೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು ಮೊದಲು ತಮ್ಮ ಉಳುಕು ಸರಿ ಮಾಡಿಕೊಳ್ಳಲಿ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೇ ಅವರ ಪಕ್ಷದವರು ತಿರುಗಿ ಬಿದ್ದಿದ್ದಾರೆ.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ನಮ್ಮ ಸಿಎಂ ವಿರುದ್ಧ ಯಾರೂ ಇಲ್ಲ. ಸಿಎಂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. ಆರ್.ಅಶೋಕ್ ಹಾಗೂ ವಿಜಯೇಂದ್ರಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರು ಜೋಡೆತ್ತುಗಳು. ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಭೇಟಿ ಆಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೆಳಹಂತಕ್ಕೆ ಹೋಗೋದಿಲ್ಲ ಎಂದು ಹರಿಹಾಯ್ದರು.