ಮಂಗಳೂರು:- ವಿದ್ಯಾರ್ಥಿಗಳು ಸಂಘಟನೆಗಳಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸೇವಾದಳ ದೇಶದ ದೊಡ್ಡ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ದೇಶಪ್ರೇಮವನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಬೇಕು ಎಂದು ವಿದಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಕರೆ ನೀಡಿದರು
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಹಳಷ್ಟು ಮಂದಿ ಯುವಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇಶ ಸೇವೆ ಮಾಡುವ ಮನಸ್ಸು ಪ್ರತಿಯೊಬ್ಬರಲ್ಲೂ ಮೂಡಬೇಕು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಎಲ್ಲರೂ ತಿಳಿದುಕೊಂಡು ಅವರ ಆದರ್ಶದಡಿ ಸಾಗಬೇಕು ಎಂದರು.