ಬೆಂಗಳೂರು:- ಹೆಚ್ಚುವರಿ ಡಿಸಿಎಂ ಬಗ್ಗೆ ಸುರ್ಜೇವಾಲ ಅವರೇ ಉತ್ತರಿಸುತ್ತಾರೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಬೇಡಿಕೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನೇ ಕೇಳಿ. ಅವರೇ ಇದಕ್ಕೆ ಸರಿಯಾದ ಉತ್ತರ ನೀಡುತ್ತಾರೆ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಕುರಿತು ಮಾಹಿತಿ ನೀಡಿದರು.
ಪಕ್ಷದ ಎಲ್ಲ ಶಾಸಕರು, ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆ ಸಭೆ ನಡೆಸುತ್ತೇವೆ. ಸಭೆಯಲ್ಲಿ ಪಕ್ಷದ ಸಂಘಟನೆ, ಬೂತ್ ಮಟ್ಟದಲ್ಲಿ ಬಿಎಲ್ಎಗಳು, ಮತದಾರರ ಹೆಸರು ಸೇರ್ಪಡೆ, ಪರಿಷ್ಕರಣೆ, ಗ್ಯಾರಂಟಿ ಅನುಷ್ಠಾನ, ಜಿಲ್ಲಾ ಮಟ್ಟದ ಸಭೆ, ವಿಧಾನಸಭೆ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ, ಕಾರ್ಯಕರ್ತರ ಸಮಾವೇಶ, ರಾಜ್ಯ ಮಟ್ಟದ ಸಮಾವೇಶದ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.