ಟೀಮ್ ಇಂಡಿಯಾ ಯಂಗ್ ಪವರ್ಫುಲ್ ಓಪನರ್ ಯಶಸ್ವಿ ಜೈಸ್ವಾಲ್ ಅವರ ಬಗ್ಗೆ ಭಾರತೀಯ ಕ್ರಿಕೆಟ್ ದಿಗ್ಗಜ ಹಾಗೂ ಮಾಜಿ ನಾಯಕ ಸುನೀಲ್ ಗವಾಸ್ಕರ್ ದೊಡ್ಡ ಭವಿಷ್ಯ ನುಡಿದಿದ್ದಾರೆ. ಭಾರತ ತಂಡದ ಮೂರೂ ಸ್ವರೂಪದಲ್ಲಿ ಜೈಸ್ವಾಲ್ ಅವರನ್ನು ಆಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಪ್ರಸ್ತುತ ಭಾರತ ತಂಡದ ಜೊತೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಯಶಸ್ವಿ ಜೈಸ್ವಾಲ್ ಇದ್ದಾರೆ. ಭಾನುವಾರ ಡರ್ಬನ್ನಲ್ಲಿ ಮೊದಲನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಆಡಬೇಕಾಗಿತ್ತು. ಮಳೆಯ ಕಾರಣ ಟಾಸ್ ಕಾಣದೆ ಮೊದಲನೇ ಟಿ20 ಪಂದ್ಯ ಅಂತ್ಯವಾಗಿತ್ತು. ಎರಡನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ.
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಸುನೀಲ್ ಗವಾಸ್ಕರ್, ಯಶಸ್ವಿ ಜೈಸ್ವಾಲ್ ಅವರು ಯುವ ಆಟಗಾರರ ಬೋಲ್ಡ್ನೆಸ್ ಹೊಂದಿದ್ದಾರೆ ಹಾಗೂ ಅತ್ಯುತ್ತಮ ಪ್ರತಿಭೆಯನ್ನು ಹೊಂದಿದ್ದಾರೆ. ಭಾರತ ತಂಡದ ಭವಿಷ್ಯವನ್ನು ಯಶಸ್ವಿ ಜೈಸ್ವಾಲ್ ಅತ್ಯುತ್ತಮವಾಗಿ ಆರಂಭಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಅವರು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರು ಅತ್ಯುತ್ತಮ ಪ್ರತಿಭೆಯನ್ನು ಹೊಂದಿದ್ದಾರೆ ಹಾಗೂ ಎಡಗೈ ಬ್ಯಾಟ್ಸ್ಮನ್ ಆಗಿರುವ ಕಾರಣ ಅವರು ತಂಡಕ್ಕೆ ಲಾಭದಾಯಕವಾಗಲಿದ್ದಾರೆ. ಯುವಕರಲ್ಲಿನ ಬೋಲ್ಡ್ನೆಸ್ ಹಾಗೂ ತಾಜಾತನವನ್ನು ಅವರು ಹೊಂದಿದ್ದಾರೆ,” ಎಂದು ಸುನೀಲ್ ಗವಾಸ್ಕರ್ ಶ್ಲಾಘಿಸಿದ್ದಾರೆ.