ಕೊಪ್ಪಳ: ‘ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ, ಜೆಡಿಎಸ್ನ 12 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ‘ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ನಗರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಜೆಡಿಎಸ್ ನೀತಿಗಳಿಂದ ಕೆಲವು ಶಾಸಕರು ಬೇಸತ್ತಿದ್ದಾರೆ.ಚುನಾವಣೆ ಸಮಯದಲ್ಲಿ ಅವರೆಲ್ಲರೂ ಕಾಂಗ್ರೆಸ್ಗೆ ಬರುವುದಾಗಿ ತಿಳಿಸಿದ್ದಾರೆ’ ಎಂದರು.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
‘ಬರ ಎದುರಿಸಲು ರಾಜ್ಯ ಸರಕಾರದಿಂದ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಸ್ಡಿಆರ್ಎಫ್ನಿಂದ ಕೊಡಬೇಕಾದದ್ದನ್ನು ಕೊಡುತ್ತಿದ್ದೇವೆ. ಆದರೆ, ಕೇಂದ್ರದಿಂದ ಪರಿಹಾರ ಬರುತ್ತಿಲ್ಲ. ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಕುರಿತು ನಳಿನ್ ಕುಮಾರ್ ಕಟೀಲ್ ಮಾತನಾಡುವುದು ಬಿಟ್ಟು ಪರಿಹಾರ ಕೊಡಿಸಲಿ’ ಎಂದು ಹೇಳಿದರು.