ಬೆಂಗಳೂರು;- ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಒಬ್ಬಳ ಜೊತೆ ಲವ್ವಿ-ಡವ್ವಿ, ಮತ್ತೊಬ್ಬಳ ಜೊತೆ ಮದುವೆ: ಮಂಟಪದಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವತಿ!
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ ಅಲ್ಲ, ಅವರ ಅನುಯಾಯಿಗಳು ರಜಾಕರಲ್ಲ. ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ ಎಂದರು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್. ಅಶೋಕ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಸಚಿವರ ಆಪ್ತ ರಾಜು ಕಪನೂರ್ ಒಬ್ಬ ಗೂಂಡಾ, ಅಕ್ರಮ ಪಿಸ್ತೂಲ್ ಹೊಂದಿದ್ದ. ಗುತ್ತಿಗೆದಾರ ಸಚಿನ್ ಪಾಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದರು.