ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. “ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ.
ಜಯತೆ, ಜಯತೆ, ಸತ್ಯಮೇವ ಜಯತೆ!! ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ” ಎಂದಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.