ಕಾರವಾರ:- ಸಭ್ಯತೆ ವಿಷಯದಲ್ಲಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಅನಂತಕುಮಾರ ಹೆಗಡೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತಾನಾಡಿರುವ ಮಾತನ್ನು ತಮ್ಮ ಪಕ್ಷದ ನಾಯಕರು ಸಮರ್ಥಿಸದಿರುವುದು ಸ್ವಾಭಾವಿಕ, ಅದು ತನ್ನ ವೈಯಕ್ತಿಕ ಹೇಳಿಕೆ ಎಂದರು. ಸಭ್ಯತೆ ವಿಷಯದಲ್ಲಿ ಸಿದ್ದರಾಮಯ್ಯ ತನ್ನೊಂದಿಗೆ ಸಾರ್ವಜನಿಕ ಚರ್ಚೆಯಲ್ಲಿ ಭಾಗಿಯಾಬೇಕು ಮತ್ತು ಜನ ಅದನ್ನು ನೋಡಬೇಕು, ಸಭ್ಯತೆಯಿಂದ ಅವರು ಮಾತಾಡಿದ್ದು ಯಾವಾಗ? ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ, ದೇವಸ್ಥಾನಗಳು ಮತ್ತು ಹಿಂದೂತ್ವದ ಬಗ್ಗೆ ಅವರು ಅಸಭ್ಯವಾಗಿ ಮಾತಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರ ಬಗ್ಗೆ ಮಾತಾಡುವಾಗ ಸಭ್ಯತೆ ಮತ್ತು ಸಂಸ್ಕೃತಿಯ ಎಲ್ಲೆ ಮೀರಿ ಮಾತಾಡಿದ್ದಾರೆ ಎಂದು ಅನಂತಕುಮಾರ ಹೆಗಡೆ ಹೇಳಿದರು.