ಬೆಂಗಳೂರು: ರಾಮ ಕರ ಸೇವಕರ ಪಟ್ಟಿಯನ್ನು ಕೊಡುತ್ತೇನೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಬಂಧಿಸಲಿ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸವಾಲೆಸೆದರು. ಬೆಂಳೂರಲ್ಲಿಂದು ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತನಗೆ ಆಹ್ವಾನ ಸಿಕ್ಕಿಲ್ಲ್ಲ ಎಂದು ಪಿಳ್ಳೆನೆವ ಹೇಳುವ ಬದಲು ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದೂ ಧರ್ಮದೆಡೆ ಬದ್ಧತೆ ಪ್ರದರ್ಶಿಸಲಿ ಎಂದು ಶಾಸಕ ಹೇಳಿದರು.
South Korea: ನಾಯಿ ಮಾಂಸ ಸೇವನೆಗೆ ರದ್ದು : ದಕ್ಷಿಣ ಕೊರಿಯಾ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ!
ಅಲ್ಪಸಂಖ್ಯಾತರನ್ನು ಓಲೈಸಲು ರೂ. 10,000 ಕೋಟಿ ಅನುದಾನ ಘೋಷಿಸುವ ಮುಖ್ಯಮಂತ್ರಿಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 100 ದೇವಸ್ಥಾನಗಳ ಅಭಿವೃದ್ಧಿಗಾಗಿ ಒಂದೊಂದು ದೇವಸ್ಥಾನಕ್ಕೆ ರೂ. 100 ಕೋಟಿಯಂತೆ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಅನುದಾನ ಘೋಷಿಸಲಿ ಎಂದು ಸುನೀಲ ಕುಮಾರ್ ಹೇಳಿದರು.