ಬೆಂಗಳೂರು:- ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ ಎಂದು CM ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.
Basangouda Patil Yatnal: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಶಾಸಕ ಯತ್ನಾಳ್ ಪತ್ರ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಇನ್ನೂ ಮುಂದೆ ಯಾರಾದರೂ ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ. ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ತಿಳಿಸಿದರು.
ರಾಜ್ಯದ ಎಲ್ಲ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನ ಮೊಟ್ಟೆ ಕೊಡುತ್ತಿದ್ದೇವೆ. ಈಗ ಮಕ್ಕಳಿಗೆ ಹಾಲಿನ ಜೊತೆಗೆ ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಅಸಮಾನತೆ, ಅಪೌಷ್ಟಿಕತೆಯನ್ನು ಹೊಡೆದೊಡಿಸಲು ಹಾಗೂ ಗುಣಮಟ್ಟದ ಶಿಕ್ಷಣ ಕೊಡುವ ಸಲುವಾಗಿ ಈ ಯೋಜನೆಗಳನ್ನು ಮಾಡುತ್ತಿದ್ದೇವೆ. ಕನ್ನಡದ ಅಭಿಮಾನವಿರಲಿ. ಬೇರೆ ಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕು. ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರು ಇರಲಿ ಕರ್ನಾಟಕದಲ್ಲಿ ಇರುವವರೆಲ್ಲ ಕನ್ನಡಿಗರೇ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಶಾಸ್ತ್ರೀಯ ಭಾಷೆ. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಬೇರೆ ಭಾಷೆ ಕಲಿಯಿರಿ, ಆದರೆ ಕನ್ನಡ ಮರೆಯಬೇಡಿ ಎಂದು ಹೇಳಿದರು.