ಬೆಂಗಳೂರು: ಕೇರಳ ಸಿನಿರಂಗದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಸಲ್ಲಿಸಿದೆ. ಆದ್ದರಿಂದ ಕನ್ನಡ ಚಲನಚಿತ್ರೋದ್ಯಮದ ಮಹಿಳಾ ಕಲಾವಿದೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.
https://ainlivenews.com/center-for-change-in-agnipath-scheme-these-rules-are-likely-to-be-revised/
ಕನ್ನಡ ಚಿತ್ರರಂಗದ ಕಲಾವಿದೆಯರಿಗೆ ಸಂಬಂಧಪಟ್ಟಂತೆ ಚಲನಚಿತ್ರ ನಿರ್ಮಾಣ ಸಂದರ್ಭದಲ್ಲಿ ಹಾಗೂ ನಂತರದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ಒದಗಿಸುತ್ತಿರುವ ಸೌಲಭ್ಯಗಳು ಹಾಗೂ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕಲಾವಿದೆಯರೊಂದಿಗೆ ಚರ್ಚಿಸಿ ಮಾಹಿತಿ ತಿಳಿಯಲು ದಿನಾಂಕ ಸೆ.13ರಂದು ಕರ್ನಾಟಕ ಚಲನಚಿತ್ರ ಮಹಿಳಾ ಕಲಾವಿದೆಯರ ಸಭೆಯನ್ನು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕರೆಯುವಂತೆ ಈಗಾಗಲೇ ಪತ್ರದ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.