ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ಪರಿಗಣಿಸಿರುವುದರ ವಿಚಾರವಾಗಿ ಪಕ್ಷದ ಒಂದು ವರ್ಗದ ನಾಯಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿರುವ ನಡುವೆ ಕಾಂಗ್ರೆಸ್ನಲ್ಲಿಯೂ ಕೂಡ ಅಸಮಾಧಾನ ಭುಗಿಲೆದ್ದಿದೆ. ಹೌದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರ ಬದಲಾವಣೆಗೆ ಕಾಂಗ್ರೆಸ್ ಶಾಸಕರಿಂದಲೇ ಪತ್ರ ಬರೆಯಲಾಗಿದೆ.
ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
ಜಿಲ್ಲಾ ಉಸ್ತುವಾರಿ ಸಚಿವರು ಬಿಜೆಪಿ ಜೊತೆ ನಿರಂತರವಾಗಿ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಮುಖಂಡರಿಗೆ ಮುಜುಗರವಾಗುತ್ತಿದೆ. ವರ್ಗಾವಣೆ ವಿಚಾರವಾಗಿ ಸಿಎಂ ಸಹಿ ಮಾಡಿ ಅನಮೋದಿಸಿ ಆದೇಶ ಹೊರಡಿಸಿದರೂ ಜಿಲ್ಲಾ ಉಸ್ತುವಾರಿ ಸಚಿವರು ಬ್ರೇಕ್ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.
ದೂರಿನಲ್ಲಿ ಏನಿದೆ?
ಲೋಕೋಪಯೋಗಿ ಇಲಾಖೆ ಎಫ್ಡಿಎಯನ್ನು ವರ್ಗಾವಣೆ ಮಾಡುವಂತೆ ಸಿಎಂ ಕಡೆಯಿಂದ ಆದೇಶ ಮಾಡಿಸಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಆದೇಶವನ್ನು ತಡೆಹಿಡಿದಿದ್ದಾರೆ. ಬಿಜೆಪಿ ಬೆಂಬಲಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಾಂಗ್ರೆಸ್ ಶಾಸಕರುಗಳ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ . ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಚನ್ನಗಿರಿ ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸದೇ ಬಿಜೆಪಿ ಮಾಜಿ ಶಾಸಕರ ಬೆಂಬಲಿಗನಿಗೆ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ್ದಾರೆ.
ರಾಜ್ಯ ಅಪೆಕ್ಸ್ ಬ್ಯಾಂಕ್ಗೆ ಜಿಲ್ಲೆಯಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಲು ಕಾಂಗ್ರೆಸ್ ಶಾಸಕರ ಮಗನಿಗೆ ಅವಕಾಶವಿದ್ದರೂ ಉಸ್ತುವಾರಿ ಸಚಿವರು ಬಿಜೆಪಿಯವರನ್ನು ಬೆಂಬಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಎಸ್ ಎಸ್ ಮಲ್ಲಿಕಾರ್ಜುನ ಗೆದ್ದು ಶಾಸಕರಾಗಿರುವ ಕ್ಷೇತ್ರದಲ್ಲೇ ಬಿಜೆಪಿ ಲೋಕಸಭಾ ಅಭ್ಯರ್ಥಿ 25 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಪಕ್ಷಕ್ಕೆ ಹಿನ್ನಡೆಯಾಗಿದೆ. ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಮುಜುಗರವಾಗಬಹುದು. ಈ ಎಲ್ಲಾ ಕಾರಣಗಳಿಂದ ದಾವಣಗೆರೆ ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸಬೇಕು.