ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಕಾನೂನು ಸಚಿವರಿಗೆ ಪತ್ರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸರಕಾರದ ಕಾನೂನು ಸಚಿವರಿಗೆ ಇವತ್ತೇ ಪತ್ರ ಬರೆಯುವುದಾಗಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಈಚೆಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು, ಕಲ್ಲು ತೂರಿದವರು, ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ಗಲಭೆ ಮಾಡಿದ 100-150 ಜನ ಕ್ರಿಮಿನಲ್‍ಗಳ ಮೇಲಿನ ಕೇಸುಗಳನ್ನು ಹಿಂಪಡೆದಿದೆ. … Continue reading ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಕಾನೂನು ಸಚಿವರಿಗೆ ಪತ್ರ: ಛಲವಾದಿ ನಾರಾಯಣಸ್ವಾಮಿ