ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಕಲಬುರಗಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಸೇರಿ ದೇಶದ ಪ್ರಮುಖ 113 ವಿಮಾನ ನಿಲ್ದಾಣದ ಪ್ರಾಧಿಕಾರದ ನಿರ್ದೇಶಕರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ರವಾನೆಯಾಗಿದೆ. ಇದರ ಪರಿಣಾಮ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ.. ಇಲ್ಲಿದೆ ಇವತ್ತಿನ ದರಪಟ್ಟಿ..!
ನಿಲ್ದಾಣ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್ ಬೆದರಿಕೆ ತಪಾಸಣಾ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ಅಲ್ಲದೇ ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಹಾಗೂ ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ದೇಶದ ಬಹುತೇಕ ಪ್ರಮುಖ ವಿಮಾನ ನಿಲ್ದಾಣಗಳಿಗೆ LongLiv [email protected] ww 2- ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ನಾವು ತಕ್ಷಣವೇ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜೊತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಇ- ಮೇಲ್ ಐಡಿಯ ಮಾಹಿತಿ ಮತ್ತು ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದಾರೆ.
‘ಇ-ಮೇಲ್ ಎಲ್ಲಿಂದ ಬಂದಿದೆ ಮತ್ತು ಯಾರ ಕೃತ್ಯ ಎಂಬುದನ್ನು ಪತ್ತೆ ಮಾಡಲು ತನಿಖೆ ಕೈಗೊಂಡಿದ್ದೇವೆ. ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ’ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)