ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಇಂದು ಹಗುರ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಇವತ್ತು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.
ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದೆ. ಇದರ ಪರಿಣಾಮ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ
ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮಾಹಿತಿ ನೀಡಿದೆ.