ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ರಸೆಲ್ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟವಾಗಿದೆ.
ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಲಿದ ರಸೆಲ್ ಕೇವಲ 25 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿ ಮಿಂಚಿದ್ದರು.
ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ರಸೆಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸ್ ಸಿಡಿಸುವ ಮೂಲಕವೇ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಬಾರಿಸಿದ 7 ಸಿಕ್ಸ್ನೊಂದಿಗೆ ರಸೆಲ್ ಐಪಿಎಲ್ನಲ್ಲಿ 200 ಸಿಕ್ಸ್ಗಳನ್ನು ಪೂರೈಸಿದ್ದಾರೆ.
ಈ ಮೂಲಕ ಐಪಿಎಲ್ನಲ್ಲಿ ಈ ಸಾಧನೆ ಮಾಡಿದ 9ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 200 ಸಿಕ್ಸ್ಗಳನ್ನು ಪೂರೈಸಿದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಐಪಿಎಲ್ನಲ್ಲಿ ಒಟ್ಟು 1811 ಎಸೆತಗಳನ್ನು ಎದುರಿಸಿ 200 ಸಿಕ್ಸ್ಗಳ ಮೈಲುಗಲ್ಲು ದಾಟಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಆ್ಯಂಡ್ರೆ ರಸೆಲ್ ಹೊಸ ಇತಿಹಾಸ ಬರೆದಿದ್ದಾರೆ.