ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವನ್ನಪ್ಪಿದೆ. ಸಿಂಹಕ್ಕೆ ಬುಧವಾರ ಸಂಜೆ ವಾಂತಿ ಸಂಬಂಧಿತ ಲಕ್ಷಣಗಳನ್ನು ಕಾಣಿಸಿಕೊಂಡಿದೆ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ