ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.
ಹೋಳಿ ಆಚರಣೆಗೆ ಕಾವೇರಿ, ಬೋರ್ ವೆಲ್ ನೀರು ಬಳಸದಂತೆ BWSSB ಖಡಕ್ ಸೂಚನೆ!
ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಿದರು.