ಬೆಂಗಳೂರು:- ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವರಾದ ಮುರುಗೇಶ್ ನಿರಾಣಿ , ಬೈರತಿ ಬಸವರಾಜ್ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಹತ್ತು ಉಪಾಧ್ಯಕ್ಷರು ಇವರು: ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ (ಯಾದಗಿರಿ), ಎನ್ ಮಹೇಶ್ (ಚಾಮರಾಜನಗರ), ಅನಿಲ್ ಬೆನಕೆ (ಬೆಳಗಾವಿ), ಹರತಾಳು ಹಾಲಪ್ಪ (ಶಿವಮೊಗ್ಗ), ರೂಪಾಲಿ ನಾಯಕ್ (ಉತ್ತರ ಕನ್ನಡ), ಡಾ. ಬಸವರಾಜ್ ಕೇಲಗಾರ (ಹಾವೇರಿ), ಮಾಳವಿಕಾ ಅವಿನಾಶ್ (ಬೆಂಗಳೂರು) ಹಾಗೂ ಎಂ. ರಾಜೇಂದ್ರ (ಮೈಸೂರು) ಅವರನ್ನು ನೇಮಿಸಲಾಗಿದೆ.
ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಡಚಿಯ ಪಿ ರಾಜೀವ್, ಬೆಂಗಳೂರಿನ ನಂದೀಶ್ ರೆಡ್ಡಿ, ಹಾಸನ ಪ್ರೀತಮ್ ಗೌಡ ನೇಮಕಗೊಂಡಿದ್ದಾರೆ.
1೦ ಮಂದಿ ರಾಜ್ಯ ಕಾರ್ಯದರ್ಶಿಗಳು ಇವರು
ಬೀದರ್ನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ್, ಕಲಬುರಗಿಯ ಬಸವರಾಜ್ ಮತ್ತಿಮೋಡ್, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ್ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ್ ನೇಮಕ.
ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.