ಭೋಪಾಲ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 20 ವರ್ಷದ ಯುವಕನೊಬ್ಬನನ್ನು ಇಂದೋರ್ (Indore) ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಸಿಂಗ್ ಧಾಕಡ್ (24) ಎಂದು ಗುರುತಿಸಲಾಗಿದೆ. ಮೂಲತಃ ಗುಣಾ ಜಿಲ್ಲೆಯ ನಿವಾಸಿಯಾಗಿರುವ ಈತ ಲಿವ್- ಇನ್- ಪಾರ್ಟ್ನರ್ ನ ಕುತ್ತಿಗೆಗೆ ಕತ್ತರಿಯಿಂದ ಇರಿದು ಕೊಲೆ ಮಾಡಿದ್ದಾನೆ.
ಸಂತ್ರಸ್ತೆ ಮತ್ತು ಆರೋಪಿ ಇನ್ಸ್ಟಾಗ್ರಾಮ್ನಲ್ಲಿ (Instagram) ಸ್ನೇಹಿತರಾಗಿ ಕಳೆದ ಕೆಲವು ದಿನಗಳಿಂದ ನಗರದ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
https://ainlivenews.com/if-the-scar-on-your-face-is-ruining-you-then-look-here
ನಡೆದಿದ್ದೇನು..?: ಡಿಸೆಂಬರ್ 7 ರಂದು ರಾವ್ಜಿ ಬಜಾರ್ ಪ್ರದೇಶದಲ್ಲಿ ದಂಪತಿ ಬಾಡಿಗೆ ಮನೆಯಲ್ಲಿ ಮಹಿಳೆಯನ್ನು ಕೊಲ್ಲಲಾಯಿತು. ಎರಡು ದಿನಗಳ ನಂತರ ಡಿಸೆಂಬರ್ 9 ರಂದು ಪೊಲೀಸರು ಆಕೆಯ ದೇಹವನ್ನು ವಶಪಡಿಸಿಕೊಂಡರು ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಭಿನಯ್ ವಿಶ್ವಕರ್ಮ ಸುದ್ದಿಗಾರರಿಗೆ ತಿಳಿಸಿದರು.
ಆರೋಪಿ ಪ್ರವೀಣ್, ಸಂತ್ರಸ್ತೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದಾಗ ಕೋಪಗೊಂಡು ಅವಳ ಕುತ್ತಿಗೆಗೆ ಕತ್ತರಿಯಿಂದ ಇರಿದಿದ್ದಾನೆ. ಪರಿಣಾಮ ಮಹಿಳೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಆರೋಪಿಗಳು ಗಾಬರಿಗೊಂಡು ಮನೆಗೆ ಹೊರಗಿನಿಂದ ಬೀಗ ಹಾಕಿ ಆಕೆಯ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ವಿಶ್ವಕರ್ಮ ತಿಳಿಸಿದ್ದಾರೆ.