ನವದೆಹಲಿ:- ಬಿಜೆಪಿ ಮುಖಂಡ ಎಲ್ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿರುವ ಹಿನ್ನೆಲೆ ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Gold Price: ಚಿನ್ನದ ಬೆಲೆ ಸ್ಥಿರ.. ಬೆಳ್ಳಿ ಅಲ್ಪ ಹೆಚ್ಚಳ…ಇಲ್ಲಿದೆ ಇಂದಿನ ದರಪಟ್ಟಿ!
ಎಲ್ಕೆ ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.
ಕಳೆದ ವಾರವೂ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದದ್ ಎಲ್ಕೆ ಅಡ್ವಾಣಿ ಅವರನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ, ಜೂನ್ 26 ರಂದು ರಾತ್ರಿ 10.30 ರ ಸುಮಾರಿಗೆ ಅಡ್ವಾಣಿ ಅವರನ್ನು ಏಮ್ಸ್ಗೆ ದಾಖಲಿಸಲಾಯಿತು. ಅವರು ಮೂತ್ರಶಾಸ್ತ್ರ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.