ದಾವಣಗೆರೆ:– ಚನ್ನಗಿರಿ ಲಾಕಪ್ ಡೆತ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆದಿಲ್ ಸಾವಿನ ರಹಸ್ಯ ಬಯಲಾಗಿದೆ.
Hubballi: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್..!
ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ. ಇದೊಂದು ಲಾಕಪ್ ಡೆತ್. ಪೊಲೀಸರೇ ಸಾಯಿಸಿದ್ದಾರೆ ಎಂದು ಮೃತ ಆದಿಲ್ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಆಕ್ರೋಶಗೊಂಡು ಠಾಣೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಇದೀಗ ಆದಿಲ್ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು, ಆ ವರದಿ ಅದು ಟಿವಿ9ಗೆ ಲಭ್ಯವಾಗಿದೆ. ಲೋ ಬಿಪಿಯಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ.