ಕೋಲಾರ:– 2024 ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಶುರುವಾಗಿದ್ದು, ಕೋಲಾರದಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನೂ ಜಿಲ್ಲೆಯಲ್ಲಿ ಮತಎಣಿಕೆ ಕೇಂದ್ರಕ್ಕೆ ಸಿಬ್ಬಂದಿ ಆಗಮಿಸುತ್ತಿದ್ದು, ಭದ್ರತಾ ಸಿಬ್ಬಂದಿ ಸಿಬ್ಬಂದಿಗಳ ತಪಾಸಣೆ ಮಾಡಿ ಒಳ ಬಿಡುತ್ತಿದ್ದಾರೆ. ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಲಾಗುತ್ತದೆ.
ಮತೆಣಿಕೆ ಕೇಂದ್ರಕ್ಕೆ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ನಿರ್ಬಂಧ ವಿಧಿಸಲಾಗಿದೆ. ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ನಡೆಯಲಿರುವ ಮತ ಎಣಿಕೆ ಕಾರ್ಯ ನಡೆಯಲಿದೆ. ಅಧಿಕಾರಿಗಳು 7.45 ಕ್ಕೆ ಸ್ಟ್ರಾಂಗ್ ರೂಂ ಓಪನ್ ಮಾಡಲಿದ್ದಾರೆ.
ಚುನಾವಣಾಧಿಕಾರಿಗಳು ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಿದ್ದಾರೆ.
ಮತೆಣಿಕೆ ಹಿನ್ನೆಲೆ ಕೋಲಾರ ಜಿಲ್ಲಾ ಕೇಂದ್ರಕ್ಕೆ ನಾಕಾಬಂಧಿ,ಕೋಲಾರ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.