ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮದ್ದೂರು ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಬಹಿರಂಗ ಪ್ರಚಾರ ಸಭೆ ನಡೆಸಿದರು.
ಮಹದೇವಪುರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭರ್ಜರಿ ಪ್ರಚಾರ! – ಸಚಿವ ಬೈರತಿ ಸುರೇಶ್ ಸಾಥ್!
ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ
ಸೋಮನಹಳ್ಳಿ, ನಿಡಘಟ್ಟ, ಆಲೂರು, ಕೆ.ಹೊನ್ನಲಗೆರೆ, ಕೆ.ಬೆಳ್ಳೂರು, ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಜೊತೆಗೆ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡುವ ಮೂಲಕ ಉತ್ತಮ ಆಡಳಿತ ನೀಡಿ ರಾಜ್ಯದ ಜನಮಾನಸದಲ್ಲಿ ಉಳಿದಿದ್ದಾರೆ.
ರಾಜ್ಯದ ರೈತರ ಉಳಿವಿಗೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರು ಕೇಂದ್ರದಲ್ಲಿ ನಿಮ್ಮ ಸೇವೆ ಅವಶ್ಯಕತೆ ಇದೆ. ಹೀಗಾಗಿ ಮಂಡ್ಯದಲ್ಲಿ ನೀವೇ ಸ್ಪರ್ಧಿಸಬೇಕೆಂಬುದಕ್ಕೆ ಜನರ ಒತ್ತಾಯದಂತೆ ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ಗೆದ್ದರೆ ರಾಜ್ಯದ ದೊಡ್ಡ ಶಕ್ತಿಯಾಗಿ ರೂಪುಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ, ಜತೆಗೆ ಈ ಬಾರಿ ಬಿಜೆಪಿಯ ಬೆಂಬಲ ಕೂಡ ಇದೆ. ಕುಮಾರಸ್ವಾಮಿ ಅವರು 2 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಈ ಜಿಲ್ಲೆಯವರೇ ಆದರೂ ಇಲ್ಲಿನ ಜನರಿಗೆ ಅಪರಿಚಿತರು. ಜನರು ಅವರ ಮುಖವನ್ನೇ ನೋಡಿಲ್ಲ. ಹಣ ಇದೆ ಎಂಬ ಕಾರಣಕ್ಕೆ ಸ್ಟಾರ್ ಚಂದ್ರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದು, ಅವರನ್ನು ಬಲಿಪಶು ಮಾಡಲಿದ್ದಾರೆ ಎಂದು ಲೇವಡಿ ಮಾಡಿದರು.
ಇದೇ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಪುರಸಭಾ ಸದಸ್ಯರಾದ ಸುರೇಶ್ ಕುಮಾರ್, ಪ್ರಿಯಾಂಕಾ ಅಪ್ಪುಗೌಡ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್, ಜೆಡಿಎಸ್ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರ, ಮುಖಂಡರಾದ ಪ್ರಕಾಶ್, ಕೆಂಗಲ್ ಗೌಡ, ಕೂಳಗೆರೆ ಶೇಖರ್, ಕಾಳಯ್ಯ, ಮಹೇಶ್, ನಗರಕೆರೆ ಸಂದೀಪ್, ಸಿದ್ದು, ಮಹೇಂದ್ರ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ