ದಾರವಾಡ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಅದರಂತೆ ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ.
ಕ್ಯಾರೆಟ್ ಬೆಳೆ ಹರಿಸುತ್ತೆ ಹಣದ ಹೊಳೆ: ಕ್ಯಾರೆಟ್ ಕೃಷಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.