ಬಾಗಲಕೋಟೆ: ಬಾಗಲಕೋಟೆ ಸೇರಿದಂತೆ ಎಂಟು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೀಳಗಿ ಪಟ್ಟಣ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆಂಟ್ ಆಗಿರುವ ಮಲ್ಲೇಶ್ ದುರ್ಗದ ಅವರ ಮನೆ, ಕಚೇರಿ ಹಾಗೂ ಸ್ವಗ್ರಾಮದ ಮನೆ ಮೇಲೆ ದಾಳಿ ನಡೆದಿದೆ.
ವಿಜಯಪುರದಲ್ಲಿ ಕೆಎಚ್ಬಿ ಎಫ್ಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆಯ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದು, ಬಾಗಲಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ,ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿ ಮನೆ ಸೇರಿ ಮೂರು ಕಡೆ ಏಕಕಾಲಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈ ಎಸ್ ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು , ಪರಿಶೀಲನೆ ಕಾರ್ಯ ನಡೆದಿದೆ.
ಇನ್ನೂ ಕಲಬುರಗಿಯಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕೋಪಯೋಗಿ ಚೀಫ್ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿಯ ಎನ್ ಜಿಓ ಕಾಲೋನಿಯಲ್ಲಿರುವ ಮನೆ ಮೇಲೆ ರೇಡ್ ಮಾಡಲಾಗಿದೆ.