ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಗದಗ, ಬಳ್ಳಾರಿ ಸೇರಿ ರಾಜ್ಯಾದ್ಯಂತ ಎಂಟು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೊಸ ದಾಖಲೆ ಬರೆದ ಕೆಆರ್ಎಸ್ ಡ್ಯಾಂ: ರೈತರಿಗೆ, ಬೆಂಗಳೂರಿಗರಿಗೆ ಗುಡ್ ನ್ಯೂಸ್!
ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಾನಾಪುರ ತಹಶೀಲ್ದಾರ್, ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್ಮೆಂಟ್ ಜಂಟಿ ನಿರ್ದೇಶಕರಾದ ಶೋಭಾ ಸೇರಿದಂತೆ ಎಂಟು ಜಿಲ್ಲೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು, ಬೆಳಗಾವಿ, ಗದಗ, ಬಳ್ಳಾರಿ, ಚಿಕ್ಕಮಗಳೂರು, ಬೀದರ್, ರಾಯಚೂರಿನಲ್ಲಿ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ದಾಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.
ಅಲ್ಲದೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.
ಗದಗ ಜಿಲ್ಲೆಯ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಗದಗ-ಬೆಟಗೇರಿ ನಗರಸಭೆ ಇಂಜಿಯರ್ ಕಚೇರಿ, ಮನೆಗಳ ಮೇಲೆ, ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಮನೆ, ಕಚೇರಿ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ನಗರದ ಲಕ್ಷ್ಮೀಟೆಕ್ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ.
ತುಮಕೂರು ಆರ್ಟಿಒದಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಎಸ್ ರಾಜು ಮನೆ ಮೇಲೆ ದಾಳಿ ನಡೆದಿದೆ.