ಮೈಸೂರು: ಮುಡಾ ಕೇಸ್ನಲ್ಲಿ ವಿಚಾರಣೆಗಿಳಿದ ಲೋಕಾಯುಕ್ತ ಮೊದಲು ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್ ಜಾರಿ ಮಾಡಿದೆ.
Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು
ನಾಳೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ಎಸ್ ಪಿ ಟಿ.ಜೆ ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಚಾರಣೆಗಿಳಿದ ಲೋಕಾಯುಕ್ತ ಅಧಿಕಾರಿಗಳಿಂದ ಮೊದಲ ನೋಟಿಸ್ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 7.30ಕ್ಕೆ ಕಚೇರಿಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸಲಾಗಿದೆ
ಮುಡಾ ಹಗರಣ ಪ್ರಕರಣ ಆರೋಪಕ್ಕೆ ಸಂಬಂಧಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಇತ್ತೀಚೆಗೆ ಎಫ್ಆರ್ಆರ್ ದಾಖಲು ಮಾಡಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಸ್ಪಿ ಉದೇಶ್ ಸಿಆರ್ಪಿಸಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದರು.
ಎಫ್ಐಆರ್ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ. ಅಗತ್ಯವಿದ್ದಾಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೂ ನೋಟಿಸ್ ನೀಡಬಹುದು. ಅಷ್ಟೇ ಅಲ್ಲದೆ ಲೋಕಾಯುಕ್ತ ಬಂಧಿಸುವ ಅಧಿಕಾರವನ್ನೂ ಸಹ ಹೊಂದಿದ್ದು, ಅಗತ್ಯ ಬಿದ್ದರೆ ಸಿದ್ದರಾಮಯ್ಯರನ್ನು ವಶಕ್ಕೆ ಪಡೆಯಲೂಬಹುದಾಗಿದೆ.