ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಭ್ರಷ್ಟರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅದರಂತೆ ಹಾವೇರಿಯಲ್ಲೂ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕ್ಯಾರೆಟ್ ಬೆಳೆ ಹರಿಸುತ್ತೆ ಹಣದ ಹೊಳೆ: ಕ್ಯಾರೆಟ್ ಕೃಷಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದಡಿ ರೆಡ್ ಮಾಡಲಾಗಿದ್ದು, ರಾಣೇಬೆನ್ನೂರು ನಗರ, ಹಾವೇರಿ ನಗರದಲ್ಲಿ ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿ ಮಾಡಲಾಗಿದ್ದು, ಕಾಶಿನಾಥ್ ಭಜಂತ್ರಿ ರಾಜ್ಯ ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಮನೆ ಮೇಲೆ ರೆಡ್ ಮಾಡಿದ್ದಾರೆ.
ಇಬ್ಬರ ಅಧಿಕಾರಿಗಳಿಗೆ ಸೇರಿದ ನಾಲ್ಕು ಮನೆಗಳು,ಫಾರ್ಮ ಹೌಸ್,ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಸದ್ಯ ನಾಲ್ಕು ತಂಡಗಳಿಂದ ಮನೆಯಲ್ಲಿ ಶೋದಕಾರ್ಯ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.