ಬೆಳಗಾವಿ: ಕರ್ತವ್ಯ ಲೋಪ, ದುರಾಡಳಿತ, ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ದೂರು ಕೇಳಿಬರುತ್ತಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಇನ್ನೂ ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.
ನೀವೇನಾದ್ರೂ ಕುರಿ ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಆದಾಯ ಗಳಿಕೆ ಮಾಡಬಹುದು.! ಹೇಗೆ ಗೊತ್ತಾ..?
ಬೆಳಗಾವಿ ನಗರದ ಲಕ್ಷ್ಮೀಟೆಕ್ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.