ಬೆಳಗಾವಿ: ಗೋಕಾಕ್ ನಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐದು ತಂಡವಾಗಿ ನಗರದ ಅಧಿಕಾರಿಗಳ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಬಿ ಎಸ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಗೋಕಾಕ್ ಗ್ರೇಡ್ 2 ತಹಶೀಲ್ದಾರ್ ಶ್ರೀಕಾಂತ ಬೆಟಗೇರಿ, ಕಂದಾಯ ನೀರಿಕ್ಷಕ ಶಿವಾನಂದ ಹಿರೇಮಠ ಮನೆ ಹಾಗೂ ಕಚೇರಿಯಲ್ಲಿರುವ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕೆಎಸ್ ಆರ್ಟಿಸಿ ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಕ್ರಮವಾಗಿ ಸುಕನ್ಯಾ ಸಮೃದ್ದಿ ಯೋಜನೆ, ಪಿಂಚಣಿ ಮಂಜೂರಾತಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಈ ಹಿಂದೆಯೂ ದಾಳಿ ನಡೆಸಲಾಗಿತ್ತು. ತಹಶೀಲ್ದಾರ್ ಕಚೇರಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ದಾಳಿ ನಡೆಸಿದ್ದರು.